ಚಿಕ್ಕಮಗಳೂರು ಹದಿನೈದು ಮೆಟ್ರಿಕ್ ಟನ್ ಗಿಂತ ಅಧಿಕ ಬಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ಜಿಲ್ಲೆಯಲ್ಲಿ ನಿಷೇಧಿಸುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಶಾಸಕ ಎಚ್ ಡಿ ತಮ್ಮಯ್ಯ ಅವರನ್ನು ಒತ್ತಾಯಿಸಿದೆ. ಶಾಸಕರನ್ನು ನಗರದಲ್ಲಿ ಮಂಗಳವಾರ ಭೇಟಿ ಮಾಡಿದ ಸಂಘಟನೆಯ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.
೧೫ ಮೆಟ್ರಿ ಟನ್ ಗಿಂತ ಅಧಿಕ ಭಾರ ಹೊತ್ತ ವಾಹನಗಳು ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿವೆ ಇದರಿಂದಾಗಿ ರಸ್ತೆಗಳು ಗುಂಡಿ ಬಿದ್ದು ಸಾರ್ವಜನಿಕರು ಮತ್ತು ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿದರು.
ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ತಡೆಗಟ್ಟುವಂತೆ ಹಲವು ಬಾರಿ ಸಂಬಂಧಪಟ್ಟ ಇಲಾಖೆಗಳಿಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಈ ಸಂಬಂಧ ಜಿಲ್ಲಾಧಿಕಾರಿಗಳೂ ಸಹ ವಾಹನ ತಡೆಗಟ್ಟುವಂತೆ ಆದೇಶ ನೀಡಿದ್ದಾರೆ ಎಂದು ತಿಳಿಸಿದರು. ರಾಜ್ಯ ಉಚ್ಚ ನ್ಯಾಯಾಲಯ ಸಹ ೧೫ ಮೆಟ್ರಿಕ್ ಟನ್ ಗಿಂತ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ನಿಷೇಧಿಸುವಂತೆ ಆದೇಶ ನೀಡಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನ್ಯಾಯಾಲಯದ ಆದೇಶವನ್ನು ಜಿಲ್ಲೆಯ ಅಧಿಕಾರಿಗಳು ಪಾಲಿಸುತ್ತಿಲ್ಲ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ತಡೆಗಟ್ಟುತ್ತಿಲ್ಲ ಇದು ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗಿದೆ ಎಂದು ಹೇಳಿದರು. ಈಗಲಾದರೂ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ತಡೆಯುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಬೇಕು ಎಂದು ಶಾಸಕರನ್ನು ಒತ್ತಾಯಿಸಿದರು.
ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆಯ ರಾಜ್ಯಾಧ್ಯಕ್ಷ ಸೋಮು ನಾಯಕ್ ತಾಲೂಕು ಸಂಘಟನಾ ಕಾರ್ಯದರ್ಶಿ ರೂಪೇಶ್ ಕಡೂರು ತಾಲೂಕು ಪ್ರಧಾನ ಕಾರ್ಯದರ್ಶಿ ಸೋನಿ ನಾಯಕ್ ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA