ಕಾಸರಗೋಡು: ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಬೃಹತ್ ಅಲೆಗಳು ಸಮುದ್ರದ ದಡಕ್ಕೆ ಅಪ್ಪಳಿಸುವ ದೃಶ್ಯ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಕಾಸರಗೋಡು ಜಿಲ್ಲೆಯ ತೃಕನ್ನಾಡು ಬೀಚ್ ಈ ದೃಶ್ಯ ಕಂಡುಬಂದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪಳ್ಳಿಕೆರೆ, ರೆಡ್ ಮೂನ್ ಬೀಚ್ ನಲ್ಲಿ ಪ್ರವಾಸಿಗೆ ನಿರ್ಬಂಧ ಹೇರಲಾಗಿದೆ.
ಮೀನುಗಾರಿಕಾ ದೋಣಿಗಳು ಸಮುದ್ರಕ್ಕೆ ಇಳಿಯದೆ ದಡದಲ್ಲೇ ಲಂಗರು ಹಾಕಿದ್ದು, ಕೋಸ್ಟಲ್ ಕಾವಲು ಪಡೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಪ್ರತೀ ವರ್ಷದ ಜೂನ್ ತಿಂಗಳಲ್ಲಿ ಈ ದೃಶ್ಯ ಕಂಡುಬರುವುದು ಸಾಮಾನ್ಯವಾಗಿತ್ತು. ಆದರೆ ಈ ವರ್ಷ ಮೇ ತಿಂಗಳಲ್ಲೆ ಆರಂಭವಾಗಿದ್ದು, ಪ್ರವಾಸಿಗರು ಮತ್ತು ಮೀನುಗಾರರಲ್ಲಿ ಆತಂಕ ಮೂಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296