ಕಾರವಾರ: ಬಸ್ ಗೆ ಸ್ಕೂಟರ್ ಡಿಕ್ಕಿಯಾಗಿದ್ದು, ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡದ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಹಳದೀಪುರ ಗ್ರಾಮದ ಬಳಿ ನಡದಿದೆ. ಸವಾರ ಶಂಕರ ಹೆಗಡೆ (50) ಮೃತ ದುರ್ದೈವಿಯಾಗಿದ್ದಾರೆ.
ಕೆಎಸ್ ಆರ್ ಟಿಸಿ ಬಸ್ ಭಟ್ಕಳ ಭಾಗದಿಂದ ಕುಮಟಾದತ್ತ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಸ್ಕೂಟರ್ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಶಂಕರ ಅವರು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296