ಬೆಂಗಳೂರು: ಪ್ರತ್ಯೇಕ ಎರಡು ಘಟನೆಗಳಲ್ಲಿ ದರೋಡೆಕೋರರು ಮೊಬೈಲ್ ದೋಚಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದ್ದು, ದರೋಡೆಕೋರರ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಕಾರಿನಲ್ಲಿ ಹೋಗುತ್ತಿದ್ದ ಯುವಕನ ದರೋಡೆ:
ಕಾರಿನಲ್ಲಿ ಹೋಗುತ್ತಿದ್ದ ಯುವಕನನ್ನು ದ್ವಿಚಕ್ರ ವಾಹದಲ್ಲಿ ಹಿಂಬಾಲಿಸಿದ ಇಬ್ಬರು ದರೋಡೆಕೋರರು ಅಡ್ಡಗಟ್ಟಿ ಬೆದರಿಸಿ ಮೊಬೈಲ್ ಪೋನ್ ದೋಚಿರುವ ಘಟನೆ ರಾತ್ರಿ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಭಂದಿಸಿದಂತೆ ಪರಶುರಾಮ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.
ಕಳೆದ ರಾತ್ರಿ 9:30ರ ಸಂದರ್ಭದಲ್ಲಿ ಐಸಿರಿ ಗೋಸಾಲಾ ಬಳಿ ಪರಶುರಾಮ್ ಅವರು ತಮ್ಮ ಕಾರಿನಲ್ಲಿ ಹೋಗುತ್ತಿದ್ದಾಗ ಹೊಂಡಾ ಬೈಕ್ ನಲ್ಲಿ ಹಿಂಬಾಲಿಸಿ ಬಂದ ಇಬ್ಬರು ದರೋಡೆಕೋರರು ಅಡ್ಡಗಟ್ಟಿದ್ದಾರೆ. ನಂತರ ಅವರ ಜೊತೆ ಜಗಳವಾಡಿ ಕಾರಿನಲ್ಲಿದ್ದ ಸುಮಾರು 8 ಸಾವಿರ ಮೊತ್ತದ ಮೊಬೈಲ್ ಎಗರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಈ ಬಗ್ಗೆ ಮಹದೇವಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್ ಕಳವು:
ಹೈಗ್ರೌಂಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ ತಿಮ್ಮಯ್ಯ ರಸ್ತೆಯಲ್ಲಿ ನಿತಿನ್ ಎಂಬುವವರು ನಡೆದುಕೊಂಡು ಹೋತ್ತಿದ್ದಾಗ ಹಿಂದಿನಿಂದ ಕಪ್ಪು ಬಣ್ಣದ ದ್ವಿಚಕ್ರ ವಾಹನದಲ್ಲಿ ಬಂದ ದರೋಡೆಕೋರರು ಏಕಾಏಕಿ ಅವರ ಕೈನಲ್ಲಿದ್ದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಕಳೆದ ರಾತ್ರಿ 10:15ರಲ್ಲಿ ಈ ಘಟನೆ ನಡೆದಿದೆ. ಸುದ್ದಿ ತಿಳಿದ ಹೈಗ್ರೌಂಡ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q