ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಸರಣಿ ಮುಂದುವರಿದಿದ್ದು, ಇಂದು ಮತ್ತೊಬ್ಬರ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದು, ಕಳೆದ 1 ತಿಂಗಳಿನ ಅಂತರದಲ್ಲಿ ಜಿಲ್ಲೆಯಲ್ಲಿ 16 ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ(37) ಮೃತ ವ್ಯಕ್ತಿ. ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ. ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಇನ್ನಿಲ್ಲದಂತೆ ಕಾಡುತ್ತಿದೆ. ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಯಾರನ್ನೂ ಬಿಡುತ್ತಿಲ್ಲ. ಜಿಲ್ಲೆಯಲ್ಲಿ 1 ತಿಂಗಳ ಅಂತರದಲ್ಲಿ 16 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW