ಲೋಕಸಭಾ ಚುನಾವಣೆ ಮುಗಿದ ಬಳಿಕ ರಾಜ್ಯ ಸರ್ಕಾರವು ಮದ್ಯದ ದರದಲ್ಲಿ ಮತ್ತೆ ಏರಿಕೆ ಮಾಡಲು ಮುಂದಾಗಿದ್ದು ಪ್ರಿಯರಿಗೆ ಶಾಕ್ ನೀಡಲು ತಯಾರಿ ನಡೆಸಿದೆ. ಆದರೆ ಅಚ್ಚರಿ ಏನಂದ್ರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಆಗುವ ವೇಳೆಗೆ ಸರ್ಕಾರ 3 ಸಲ ಬಿಯರ್ ದರ ಏರಿಕೆ ಮಾಡಿ ಬಿಯರ್ ಪ್ರಿಯರಿಗೆ ಶಾಕ್ ಕೊಟ್ಟಿದೆ.
2023 ರ ವಿಧಾನಸಭಾ ಚುನಾವಣೆಯ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಈಗಾಗಲೇ ಮೂರು ಬಾರಿ ಬಿಯರ್ ಬೆಲೆಯನ್ನು ಹೆಚ್ಚಿಸಿದೆ. ಆರಂಭದಲ್ಲಿ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಲಾಗಿದ್ದು, ನಂತರ ಹೆಚ್ಚುವರಿ ಅಬಕಾರಿ ಸುಂಕವನ್ನು (ಎಇಡಿ) 185 ರಿಂದ ಶೇ.195ಕ್ಕೆ ಹೆಚ್ಚಿಸಲಾಗಿದೆ. ಇದರ ಪರಿಣಾಮವಾಗಿ ಬಿಯರ್ ಬೆಲೆಗಳು ಪ್ರತಿ ಬಾಟಲಿಗೆ ರೂ 8 ರಿಂದ 15 ರೂಪಾಯಿಯಷ್ಟು ಏರಿಕೆಯಾಯಿತು. ಕಳೆದ ಏಳೆಂಟು ತಿಂಗಳುಗಳಲ್ಲಿ ಬಿಯರ್ ಬೆಲೆಯು ಪ್ರತಿ ಬಾಟಲಿಗೆ ಸುಮಾರು 40 ರೂ.ಗಳಷ್ಟು ಏರಿಕೆಯಾಗಿದೆ.
ಅಂದಹಾಗೆ, ರಾಜ್ಯದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಹಣಕಾಸಿನ ಬಿಕ್ಕಟ್ಟು ಎದುರಾಗದಂತೆ ಸರ್ಕಾರ ಮುಂದಾಲೋಚನೆ ನಡೆಸುತ್ತಿದೆ. ಹೀಗಾಗಿ ಮತ್ತೆ ಮದ್ಯದ ದರ ಏರುವುದು ಫಿಕ್ಸ್ ಆಗಿದೆ. ಅಲ್ಲದೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮದ್ಯದ ದರ ತುಂಬಾ ಕಡಿಮೆ. ಹೀಗಾಗಿ ಈ ಮಾರ್ಗವನ್ನು ಬಳಸಿಯೇ ಸರ್ಕಾರ ಮದ್ಯಪ್ರಿಯರಿಗೆ ಶಾಕ್ ನೀಡಲು ತೆರೆಮರೆಯಲ್ಲಿ ತಯಾರಿ ಶುರುಮಾಡಿದೆ. ಒಟ್ಟಿನಲ್ಲಿ ಲೋಕಸಭೆ ಚುನಾವಣೆಯ ನಂತರ ನೆರೆಯ ರಾಜ್ಯಗಳ ಬೆಲೆಗಳನ್ನು ನೋಡಿ ಕರ್ನಾಟಕದಲ್ಲಿ ಮದ್ಯದ ಬೆಲೆಯನ್ನು ಹೆಚ್ಚಳ ಮಾಡಲು ಉದ್ದೇಶಿಸಿದೆ. ಹೀಗಾದರೆ ಮತ್ತೆ ಬಿಯರ್ ದರದಲ್ಲಿ ಭಾರೀ ಏರಿಕೆ ಆಗಲಿದ್ದು, ಸಿದ್ದು ಸರ್ಕಾರ 4ನೇ ಸಲ ಏರಿಕೆ ಮಾಡಿದಂತಾಗುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


