ಬೆಳಗ್ಗೆ 5 ಘಂಟೆ ಸಮಯದಲ್ಲಿ ನಡೆದ ಒಂದು ಘಟನೆ ನಿಜಕ್ಕೂ ಭಯ ಹುಟ್ಟಿಸುತ್ತಿದೆ. ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ.
ಬೆಂಗಳೂರಿನ ಕೋಣನಕುಂಟೆಯ (Konanakunte) ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆಯು ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಆಕೆ ಬಳಿ ಬಂದು ಆಕೆಯನ್ನು ತಬ್ಬಿಕೊಂಡು ಬಲವಂತವಾಗಿ ಮುತ್ತಿಟ್ಟಿದ್ದಾನೆ.
ಈ ವೇಳೆ ಮಹಿಳೆ ಆತನಿಂದ ತಪ್ಪಿಸಿಕೊಂಡು ಮುಂದೆ ಹೋಗಿದ್ದು, ಮತ್ತೆ ಆಕೆಯನ್ನು ಹಿಂಬಾಲಿಸಿದ ಆತ ಮತ್ತೆ ಆಕೆಯನ್ನು ತಬ್ಬಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಮಹಿಳೆ ಕಿರುಚಿಕೊಂಡಿದ್ದು, ಕೂಡಲೇ ಆತ ಆಕೆಯನ್ನು ಬಿಟ್ಟು ಓಡಿ ಹೋಗಿದ್ದಾನೆ. ಇವಿಷ್ಟೂ ಘಟನೆ ಮನೆಯೊಂದಕ್ಕೆ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಬೆಂಗಳೂರು ಪೊಲೀಸರು ಅಪರಾಧಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 76, 78 ಮತ್ತು 79 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಜೊತೆಗೆ ಶಂಕಿತನ ಬಂಧನಕ್ಕೆ ಬಲೆ ಬೀಸಿದ್ದಾರೆ. ದಕ್ಷಿಣ ಪೊಲೀಸ್ ಉಪ ಆಯುಕ್ತ (ಡಿಸಿಪಿ) ಲೋಕೇಶ್ ಜಗಲಾಸರ್ ಅವರು ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ ಮತ್ತು ಮಹಿಳೆಯರ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದೆ. ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದು. ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರ ಗಸ್ತು ಹೆಚ್ಚಿಸಲಾಗುವುದು ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296