ಒಡಿಶಾ: ಮನೆಯಲ್ಲಿ ಒಬ್ಬಳೇ ಇದ್ದ ಏಳು ವರ್ಷದ ಬಾಲಕಿಯ ಮೇಲೆ ದುರ್ಷಕರ್ಮಿಯೊಬ್ಬ ಅತ್ಯಾಚಾರವೆಸಗಿ ಬಳಿಕ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರ ನಡೆದ ಕೊನೆ ಹಂತದ ಲೋಕಸಭಾ ಚುನಾವಣೆಗೆ ಮತದಾನ ಮಾಡಲು ಪೋಷಕರು ಮತಗಟ್ಟೆಗೆ ತೆರಳಿದ್ದರು. ಈ ವೇಳೆ ಬಾಲಕಿಯೊಬ್ಬಳೇ ಮನೆಯಿದ್ದ ವಿಷಯ ತಿಳಿದ 23 ವರ್ಷದ ಆರೋಪಿ ಆಕೆಯನ್ನು ನದಿಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಬಳಿಕ ಕತ್ತು ಹಿಸುಕಿ ಹತ್ಯೆಗೈದಿದ್ದಾನೆ.
ಮನೆಯಲ್ಲಿ ಇಲ್ಲದ ಬಾಲಕಿಗಾಗಿ ಪೋಷಕರು ಹುಡುಕಾಟ ನಡೆಸಿದ್ದಾರೆ. ಭಾನುವಾರ ಬಾಲಕಿಯ ಶವ ನದಿ ಸಮೀಪ ಪತ್ತೆಯಾಗಿದ್ದು ಕೂಡಲೇ ಗ್ರಾಮಸ್ಥರು ಪೊಲೀಸರು ಮಾಹಿತಿ ನೀಡಿದ್ದಾರೆ ಹಾಗೂ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 376ಎಬಿ (ಅತ್ಯಾಚಾರ) ಮತ್ತು 302(ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


