ಗಾಂಧಿನಗರ: ಐದು ವರ್ಷದ ಬಾಲಕಿಯನ್ನು ಅಪಹರಿಸಿದ ವ್ಯಕ್ತಿಯೊಬ್ಬ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಗುಜರಾತ್ ನ ಛೋಟೌದೇಪುರ ಜಿಲ್ಲೆಯಲ್ಲಿ ನಡೆದಿದೆ.
ಹತ್ಯೆ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಾಲಾ ತಡ್ವಿ ಎಂಬಾತ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಬಾಲಕಿಯನ್ನು ಆಕೆಯ ಮನೆಯಿಂದ ಅಪಹರಿಸಿದ ಬಳಿಕ ತನ್ನ ಮನೆಗೆ ಕರೆದೊಯ್ದು, ಕೊಡಲಿಯಿಂದ ಆಕೆಯ ಕುತ್ತಿಗೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.
ನಂತರ ಬಾಲಕಿಯ ಕುತ್ತಿಗೆಯಿಂದ ಹೊರಬರುತ್ತಿದ್ದ ರಕ್ತವನ್ನು ಸಂಗ್ರಹಿಸಿ, ಅದರಲ್ಲಿ ಸ್ವಲ್ಪ ಭಾಗವನ್ನು ತನ್ನ ಮನೆಯಲ್ಲಿರುವ ದೇವಾಲಯದ ಮೆಟ್ಟಿಲುಗಳ ಮೇಲೆ ಅರ್ಪಿಸಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4