ಟ್ರ್ಯಾಕ್ಟರ್ ಟ್ರಾಲಿಗೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರ ಪ್ರಯಾಣಿಕರು ಮೃತಪಟ್ಟು 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಆಹಮದಾಬಾದ್ ತೆರಳುತ್ತಿದ್ದ ಬಸ್ ಶಾರ್ಜಾಪುರ ಬಳಿ ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ತುರ್ತು ಚಿಕಿತ್ಸಾ ದಳದವರು ನೆರವು ನೀಡಿ, ಗಾಯಾಳುಗಳನ್ನು ಸ್ಥಳಾಂತರಿಸಿ, ಚಿಕಿತ್ಸೆಗಾಗಿ ಉಜ್ಜಯಿನಿಯ ಸಮೀಪದ ಆಸ್ಪತ್ರೆಗೆ ಸಾಗಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


