ದೊಡ್ಡಬಳ್ಳಾಪುರ: 70 ವರ್ಷ ವಯಸ್ಸಿನ ವೃದ್ಧರೊಬ್ಬರನ್ನು ಮನೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದ ವಾಸುದೇವನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಈರಣ್ಣ (70) ಎಂದು ಗುರುತಿಸಲಾಗಿದೆ.
ಈರಣ್ಣ ದೊಡ್ಡಬಳ್ಳಾಪುರದ ವಾಸುದೇವನಹಳ್ಳಿಯ ತಮ್ಮ ಮನೆಯ ಹೊರಗೆ ರಾತ್ರಿ ಮಲಗಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಕುತ್ತಿಗೆಯಲ್ಲಿ ಚಾಕು ಇರಿದಿರುವುದು ಕಂಡು ಬಂದಿದೆ. ಈರಣ್ಣ ಅವರ ಕುತ್ತಿಗೆಗೆ ಚಾಕು ಹಾಕಿ ಹಾಗೇ ಬಿಟ್ಟಿರುವ ದುಷ್ಕರ್ಮಿಗಳು ನಂತರ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ.
ಬೆಳಗ್ಗೆ ಮನೆಯವರು ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರನ್ನಾಧರಿಸಿ ಸ್ಥಳಕ್ಕೆ ಭೇಟಿ ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4