ಬೆಳಗಾವಿ: ರಜೆಯಲ್ಲಿ ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ನಗರದ ಅನಗೋಳದ ಬಜಾರ್ ನಲ್ಲಿ ನಡೆದಿದೆ.
ಇಬ್ರಾಹಿಂ ದೇವಲಾಪುರ (37) ಮೃತಪಟ್ಟ ಯೋಧ ಆಗಿದ್ದು, ಇವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ರಜೆಯ ಹಿನ್ನೆಲೆ ಇಬ್ರಾಹಿಂ ಊರಿಗೆ ಬಂದಿದ್ದರು. ಅನಗೋಳದ ಬಜಾರ್ ಗೆ ತೆರಳಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾದ ಅವರು ಕುಸಿದು ಬಿದ್ದಿದ್ದಾರೆ.
ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲು ಯತ್ನಿಸಲಾಯಿತು. ಆದರೆ ಆಸ್ಪತ್ರೆಯ ದಾರಿ ಮಧ್ಯೆ ಅವರು ನಿಧನರಾಗಿದ್ದಾರೆ. ಎದೆನೋವಿನಿಂದ ಯೋಧ ಕುಸಿದು ಬೀಳುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC