ತುಮಕೂರು: ಗಾಂಧಿನಗರ ಬಡಾವಣೆಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ತೆರೆಯಲಾಗಿರುವ ವಿಶೇಷವಾದ ಸಖಿ ಮತಗಟ್ಟೆ ಕೇಂದ್ರವು ಮತದಾರರನ್ನು ಸಾಕಷ್ಟು ಆಕರ್ಷಣೆಗೆ ಒಳಗಾಗಿಸಿದೆ.
ಹೊರಭಾಗದ ಗೋಡೆಯಲ್ಲಿ ಮಹಿಳೆಯರ ಚಿತ್ರಗಳನ್ನು ಚಿತ್ರಿಸಲಾಗಿದ್ದು ಮತದಾನಕ್ಕೆ ಪ್ರೇರೇಪಿಸಲಾಗುತ್ತಿದೆ. ಅಲ್ಲದೆ ವಿಶೇಷವಾಗಿ ಈ ಮತಗಟ್ಟೆ ಕೇಂದ್ರದಲ್ಲಿ ಪುರುಷರಿಗಿಂತ ಮಹಿಳೆಯರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಕೂಡ ಗಮನಾರ್ಹ ಅಂಶವಾಗಿದೆ.
ಮತಗಟ್ಟೆ ಮುಂಭಾಗ ಬಲೂನ್ ಗಳನ್ನು ಕಟ್ಟಿ ವಿಭಿನ್ನವಾಗಿ ಅಲಂಕರಿಸಲಾಗಿದೆ. ಮತಗಟ್ಟೆ ಕೇಂದ್ರದಲ್ಲಿ ಇರುವ ಸಿಬ್ಬಂದಿಗಳು ಕೂಡ ಮಹಿಳೆಯರೇ ಆಗಿರುವುದು ವಿಶೇಷವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296