ಬೆಂಗಳೂರು: ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿ ರೈಲಿನ ಎರಡು ಕೋಚ್ ಗಳಿಗೆ ಆವರಿಸಿ ಆತಂಕ ಸೃಷ್ಟಿಸಿದೆ.
ರೈಲು ಸಂಖ್ಯೆ 11301 ಉದ್ಯಾನ್ ಎಕ್ಸ್ ಪ್ರೆಸ್ ಪ್ಲಾಟ್ ಫಾರ್ಮ್ ಸಂಖ್ಯೆ 3 ರಲ್ಲಿ 05.45 ಗಂಟೆಗೆ ಸಂಗೊಳ್ಳಿ ರಾಯಣ್ಣ ಬಸ್ ನಿಲ್ದಾಣಕ್ಕೆ ಬಂದು ನಿಲ್ಲಿಸಿತು. ಸುಮಾರು 07.10ಗಂಟೆಗೆ ರೈಲಿನ ಬಿ1 ಮತ್ತು ಬಿ2 ಬೋಗಿಗಳಲ್ಲಿ ಹೊಗೆ ಕಾಣಿಸಿಕೊಂಡಿತ್ತು.
ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಬೆಳಗ್ಗೆ 7:35ಕ್ಕೆ ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪಿದ್ದು, ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅಪಾಯ ತಪ್ಪಿಸಿದೆ.


