ನಾಯಿಯೊಂದು 5 ತಿಂಗಳ ಮಗುವನ್ನು ಕಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ಮೇ.14 ರಂದು ನಡೆದಿದೆ. ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ.
ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ. ಕೆಲಸದ ಸ್ಥಳದಲ್ಲಿದ್ದ ಸಾಕು ನಾಯಿ ಅದು ಎಂದು ಸ್ಥಳೀಯ ನಿವಾಸಿಗಳು ಹೇಳಿದರೆ, ಜಾಗದ ಮಾಲೀಕರು ಬೀದಿ ನಾಯಿ ಎಂದು ಹೇಳಿದ್ದಾರೆ. ಕಳೆದ ತಿಂಗಳು ಬೀದಿ ನಾಯಿಗಳ ದಾಳಿಯಲ್ಲಿ ಕನಿಷ್ಠ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. 2022 ರಿಂದ 2023 ರವರೆಗೆ ನಾಯಿ ಕಡಿತದ ಘಟನೆಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಡಿಸೆಂಬರ್ ನಲ್ಲಿ ವರದಿ ಮಾಡಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA