ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಉಪನ್ಯಾಸಕ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಘಟನೆ ಸಂಬಂಧ ವಿದ್ಯಾರ್ಥಿನಿ ನೀಡಿದ ದೂರಿನನ್ವಯ ಉಪನ್ಯಾಸಕನ ವಿರುದ್ಧ ಎಫ್ ಐಆರ್ ದಾಖಲಿಸಿ ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರದ ಹೆಸರಾಂತ ಖಾಸಗಿ ಕಾಲೇಜಿನ ಉಪನ್ಯಾಸಕ ಪುನೀತ್ ಮದುವೆಯಾಗುವುದಾಗಿ ನಂಬಿಸಿ ತಾನು ಕಾರ್ಯ ನಿರ್ವಹಿಸುತ್ತಿರುವ ಕಾಲೇಜಿನ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿ ವಂಚಿಸಿರುವುದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಅರ್ಥವಾಗದ ವಿಷಯಗಳ ಕುರಿತು ಪಾಠ ಹೇಳುವುದಾಗಿ ನಂಬಿಸಿ ಪುಸಲಾಯಿಸಿ, ಸ್ನೇಹ ಬೆಳಸಿಕೊಂಡ ಉಪನ್ಯಾಸಕ ನಂತರ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಶಿವಮೊಗ್ಗದ ಮಹಿಳಾ ಠಾಣೆಯ ಪೊಲೀಸರು ಯುವತಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಪುನೀತ್ ನನ್ನು ಬಂಧಿಸಿದ್ದು, ಎಫ್ ಐಆರ್ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q