ಚಿಕ್ಕಬಳ್ಳಾಪುರ: ಒಂಬತ್ತನೇ ತರಗತಿ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದಕ್ಕೆ ವಿದ್ಯಾರ್ಥಿಯೊಬ್ಬನಿಗೆ ಸಾರ್ವಜನಿಕರಿಂದ ಧರ್ಮದೇಟು ಬಿದ್ದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯು ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಗೆ ಚುಡಾಯಿಸಿದ ಆರೋಪ ಕೇಳಿ ಬಂದಿದ್ದು, ಇದರಿಂದ ಕೆರಳಿದ ಸಾರ್ವಜನಿಕರು ಆತನನ್ನು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿರುವ ಗೋಡೌನ್ ನಲ್ಲಿ ಹಾಕಿ ಹಿಗ್ಗಾಮುಗ್ಗವಾಗಿ ಥಳಿಸಿದ್ದಾರೆ. ಸಾರ್ವಜನಿಕರೊಂದಿಗೆ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಶಿಕ್ಷಕ ಮಹಂತೇಶ್ ಕೂಡ ವಿದ್ಯಾರ್ಥಿಗೆ ಥಳಿಸಿದ್ದಾರೆ.


