ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದಿದೆ. ಕಬ್ಬನ್‌ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿಟಿಒ ವೃತ್ತದ ಸಮೀಪ ಬುಧವಾರ ಮಧ್ಯರಾತ್ರಿ ಕಾರು ಚಲಿಸುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು.
ಎಚ್ಚೆತ್ತ ಚಾಲಕ ಕಾರನ್ನು ರಸ್ತೆ ಬದಿಗೆ ನಿಲುಗಡೆ ಮಾಡಿ ಕೆಳಗಿಳಿದರು. ನೋಡುತ್ತಿದ್ದಂತೆಯೇ ಕಾರು ಸುಟ್ಟು ಹೋಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.


