ತುಮಕೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಆರಂಭದಲ್ಲೇ ‘ನವೆಂಬರ್ ಕ್ರಾಂತಿ’ ಎಂದು ಹೇಳಿಕೆ ನೀಡಿದ್ದ ಮಾಜಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಇದೀಗ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಮತ್ತೆ ಹೇಳಿಕೆ ನೀಡಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಯ್ಕೆ ಅಚ್ಚರಿ ಎಂಬಂತೆ ನಡೆಯಬಹುದು ಎಂದಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಾಕಷ್ಟು ಸಲ ಅಚ್ಚರಿ ಎನ್ನುವಂತೆ ಮುಖ್ಯಮಂತ್ರಿ ಆಯ್ಕೆ ಮಾಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಯಾವ ರೀತಿ ತೀರ್ಮಾನ ಆಗುತ್ತದೆ ಎಂದು ಹೇಳುವುದು ಕಷ್ಟ ಎಂದಿರುವ ಅವರು, ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾದ ಸಮಯದಲ್ಲೂ ರಾಜ್ಯದಲ್ಲಿ ಇಂತಹದ್ದೇ ಪರಿಸ್ಥಿತಿ ನಿರ್ಮಾಣವಾಗಿತ್ತು ಅಂತ ಉದಾಹರಣೆ ನೀಡಿದರು.. ಹೈಕಮಾಂಡ್ ತೀರ್ಮಾನದಂತೆ ಮೊಯ್ಲಿ ಮುಖ್ಯಮಂತ್ರಿಯಾದರು ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC



