ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಬಿಯರ್ ತಯಾರಿಕಾ ಘಟಕದ ಮೇಲೆ ದಾಳಿ ನಡೆದಿದೆ. ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ಅಬಕಾರಿ ಜಂಟಿ ಆಯುಕ್ತರ ತಂಡ ದಾಳಿ ನಡೆಸಿದ್ದು, ಬರೋಬ್ಬರಿ 98.52 ಕೋಟಿ ರೂ. ಮೊತ್ತದ ಬಿಯರ್ ದಾಸ್ತಾನು ಜಪ್ತಿ ಮಾಡಿದೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಾರ್ಖಾನೆ ಇದಾಗಿದೆ. ದೂರವಾಣಿ ಮೂಲಕ ಬಂದ ಮಾಹಿತಿಯನ್ನು ಆಧರಿಸಿ ಅಧಿಕಾರಿಗಳು ದಾಳಿ ಮಾಡಿದಾಗ, ಸರ್ಕಾರಕ್ಕೆ ತೋರಿಸಿರುವ ದಾಸ್ತಾನು ಲೆಕ್ಕಕ್ಕಿಂತ ಅಧಿಕ ದಾಸ್ತಾನು ಸಂಗ್ರಹ ಪತ್ತೆ ಆಗಿದೆ.
7 ಸಾವಿರ ವಿವಿಧ ಬ್ರಾಂಡಿನ ಪೆಟ್ಟಿಗೆಗಳಲ್ಲಿದ್ದ ಬಿಯರ್ ಬಾಟಲಿಗಳು, ಯುಟಿ ಟ್ಯಾಂಕ್, ಸೈಲೋಸ್ ಟ್ಯಾಂಕ್ ಗಳಲ್ಲಿರುವ ಕಚ್ಚಾ ವಸ್ತು ಸಮೇತ ಜಪ್ತಿ ಮಾಡಲಾಗಿದೆ. ಈ ಸಂಬಂಧ 17 ಮಂದಿ ವಿರುದ್ಧ ದಾಖಲಾಗಿದ್ದು, ನಾಪತ್ತೆಯಾದವರಿಗಾಗಿ ಅಬಕಾರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


