ತುಮಕೂರು: ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಹೋಗುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರ ಸ್ಥಿತಿ ಗಂಭೀರವಾಗಿರೋ ಘಟನೆ ತುಮಕೂರು ನಗರದ ಕ್ಯಾತ್ಸಂದ್ರ ವೃತ್ತದ ಬಳಿ ನಡೆದಿದೆ. ಡಿಕ್ಕಿ ಹೊಡೆಯುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ತುಮಕೂರಿನ ಕ್ಯಾತಸಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಘಟನೆ ನಡೆದಿದ್ದು ಕ್ಯಾತಸಂದ್ರ ಸರ್ಕಲ್ ಬಳಿ ರಸ್ತೆ ಕ್ರಾಸ್ ಮಾಡುತ್ತಿದ್ದ ಬೈಕ್ ಸವಾರರು, ಒಂದೇ ಬೈಕ್ ನಲ್ಲಿ ಮೂವರು ಬರ್ತಿದ್ರು.
ಈ ವೇಳೆ ಏಕಾಏಕಿಯಾಗಿ ಕಾರು, ಬೈಕ್ ಗೆ ಡಿಕ್ಕಿ ಹೊಡೆದಿದ್ದಿಂದ ಬೈಕ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಿಂದ ಮೂವರು ಬೈಕ್ ನಿಂಡ ಹಾರಿ ಬಿದ್ದಿದ್ದಾರೆ. ಕ್ಯಾತಸಂದ್ರದ ಸಂತೋಷ್, ನಾಗೇಶ್, ವಿಜಯ್ ಕುಮಾರ್ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ ಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಎಸಗಿದ ಕಾರು ಚಾಲಕ ಹಾಗೂ ಕಾರನ್ನ ವಶಕ್ಕೆ ಪಡೆದ ಕ್ಯಾತಸಂದ್ರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


