ಬೆಂಗಳೂರು: ನಾಗರಬಾವಿ ರಿಂಗ್ ರಸ್ತೆಯ ಮಲೆಮಹದೇಶ್ವರ ದೇವಸ್ಥಾನದ ಬಳಿ ಖಾಸಗಿ ಬಸ್ ಹರಿದು ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮುರಳಿ(40) ಮೃತ ದುರ್ದೈವಿಯಾಗಿದ್ದಾನೆ.
ಮುರಳಿ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭ ವೇಗವಾಗಿ ಬಂದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಬೈಕ್ ಸವಾರ ಕೆಳಗೆ ಬಿದ್ದಿದ್ದು, ಬಸ್ ಮುರಳಿ ತಲೆಯ ಮೇಲೆ ಹರಿದಿದೆ. ಇದರಿಂದ ಮುರಳಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜ್ಞಾನಭಾರತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ನಡೆದಿದೆ.
ಸದ್ಯ ಬಸ್ ಚಾಲಕನನ್ನು ಜ್ಞಾನಭಾರತಿ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಯಲ್ಲಿ ಸಾವನ್ನಪ್ಪಿದ ಮುರಳಿ ಮೃತದೇಹವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


