ಬೆಳಗಾವಿ: ಖನಗಾಂವ ಕೆಎಚ್ ಗ್ರಾಮದ ಬಳಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ವಿಠ್ಠಲ ದತ್ತಾ ಲೋಕರೆ(29) ಮೃತ ದುರ್ದೈವಿಯಾಗಿದ್ದಾರೆ.
ಬೆಳಗಾವಿ ಕಡೆಯಿಂದ ಬರುತ್ತಿದ್ದ ಬಸ್ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿತ್ತು. ಅಪಘಾತವನ್ನು ನಿಯಂತ್ರಿಸಲು ಹೋಗಿ ಬಸ್ ಕೂಡ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಾರಿಹಾಳ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


