ಕೊರಟಗೆರೆ: ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಕಾರೊಂದು ಕೊರಟಗೆರೆ ಕಡೆಯಿಂದ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ತಾಲೂಕಿನ ಜಿ.ನಾಗೇನಹಳ್ಳಿಯ ಗೊಲ್ಲರಹಟ್ಟಿ ಗೇಟ್ ಬಳಿ ಈ ಘಟನೆ ನಡೆದಿದ್ದು, ಬೆಂಗಳೂರು ಕಡೆಯಿಂದ ಬರುತ್ತಿದ್ದ ಎಕ್ಸ್‍ಯುವಿ ಕಾರೊಂದು ಕೊರಟಗೆರೆ ಕಡೆಯಿಂದ ಹೋಗುತ್ತಿದ್ದಂತಹ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದು, ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿ ಮಧುಗಿರಿ ತಾಲೂಕಿನ ಬೆಲ್ಲದಮಡಗು ಗ್ರಾಮದ ಕೃಷ್ಣಮೂರ್ತಿ(55) ಎಂದು ತಿಳಿದು ಬಂದಿದೆ.
ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ ಪ್ರಸನ್ನ ಎನ್ನುವ ವ್ಯಕ್ತಿಗೆ ಎಡಗೈ ಮತ್ತು ಎಡಗಾಲು ಕಟ್ ಆಗಿದ್ದು, ಅದೇ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಬಳಿಕ ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಗುದ್ದಿದ್ದ ಪರಿಣಾಮ ಆ ವ್ಯಕ್ತಿಯ ಎದೆಭಾಗಕ್ಕೆ ಬಲವಾದ ಪೆಟ್ಟು ಬಿದ್ದಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ತಡವಾಗಿ ಬಂದ ತುರ್ತು ವಾಹನ:
ತಾಲೂಕಿನಲ್ಲಿ ಜಿ.ನಾಗೇನಹಳ್ಳಿಯ ಗೊಲ್ಲರಹಟ್ಟಿ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದಂತೆ ಸ್ಥಳೀಯರು ತುರ್ತು ವಾಹನಕ್ಕೆ ಕರೆ ಮಾಡಿದರೆ ಸಮಯಕ್ಕೆ ಸರಿಯಾಗಿ ಬಾರದೆ 40 ನಿಮಿಷದ ಬಳಿಕ ತುರ್ತು ವಾಹನ ಸ್ಥಳಕ್ಕೆ ಬಂದಿದ್ದು, ಪದೇ ಪದೇ ಇಂತಹ ಅಪಘಾತಗಳು ಸಂಭವಿಸಿದರೆ ಸ್ಥಳಕ್ಕೆ ಸಮಯಕ್ಕೆ ಬರೋಲ್ಲಾ ಎಂದು ಸಾರ್ವಜನಿಕರು ಆರೋಪ ಮಾಡಿದ್ದಾರೆ.
ಅಪಘಾತ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಸಿಪಿಐ ಅನಿಲ್, ಪಿಎಸ್‍ಐ ಮಂಜುನಾಥ್ ಸೇರಿದಂತೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದು, ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296