ಪಾವಗಡ: ತಾಲ್ಲೂಕಿನ ಭೂಪುರು ತಾಂಡದಲ್ಲಿ ಸಂತ ಶ್ರೀ ಸೇವಾಲಾಲ್ ಮಹರಾಜ್ ರವರ 285ನೇ ಜಯಂತೋತ್ಸವವನ್ನು ಲಂಬಾಣಿ ಜನಾಂಗದಿಂದ ಸೋಮವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು.
ಬೆಳಿಗ್ಗೆ ವಿಶೇಷ ಪೂಜೆ ನೆರವೇರಿಸಿದ ನಂತರ ಸಮುದಾಯದ ಹಿರಿಯರು ಸೇರಿ, ಅಗ್ನಿಗುಂಡಕ್ಕೆ ವಿವಿದ ವಸ್ತುಗಳನ್ನು ಸಮರ್ಪಿಸುವ ಮೂಲಕ ಬೋಗ್ ಆಚರಣೆ ನೆರವೇರಿಸಿದರು. ನಂತರ ಸಂಜೆ ಸಂತ ಸೇವಾಲಾಲ್ ರ ಭಾವಚಿತ್ರ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.
ಲಂಬಾಣಿ ಮಹಿಳೆಯರು ಸಾಂಪ್ರದಾಯಿಕ ನೃತ್ಯ ಮಾಡಿದರೆ, ಯುವಜನತೆ ವಾದ್ಯಗಳ ತಾಳಕ್ಕೆ ತಕ್ಕಂತೆ ಕುಣಿದು ಸಂತಸ ಹಂಚಿಕೊಂಡರು.
ವರದಿ: ನಂದೀಶ್ ನಾಯ್ಕ ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA