ಪಾವಗಡ: ರಾಜ್ಯದ ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂ ಎಸ್ ಸಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರನ್ನು, ಫಯಾಜ್ ಎಂಬಾತ 9 ಬಾರಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ, ಮಂಗಳವಾರ ಮಧ್ಯಾಹ್ನ ಒಂದು ಗಂಟೆಯ ಸಮಯದಲ್ಲಿ, ಪಾವಗಡ ತಾಲೂಕು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡು ಗ್ರೇಟು ೨ ತಹಸೀಲ್ದಾರ್ ಎನ್ ಮೂರ್ತಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಸ್ವಾಮಿ ವಿವೇಕಾನಂದ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಡಾ. ಜಿ ವೆಂಕಟರಾಮಯ್ಯ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ, ತಾಲೂಕು ಮಂಡಲ ಮಾಜಿ ಅಧ್ಯಕ್ಷ ರವಿಶಂಕರ್ ನಾಯ್ಕ, ಡಾ, ಶಶಿ ಕಿರಣ್, ದೊಡ್ಡಹಳ್ಳಿ ಅಶೋಕ್, ಎಬಿವಿಪಿ ಮನೋಜ್, ಶೇಖರ್ ಬಾಬು, ವಾಸು, ರಾಕೇಶ್, ಸೇರಿದಂತೆ ತಾಲೂಕಿನ ವಿವಿಧ ವಿದ್ಯಾ ಸಂಸ್ಥೆಗಳು ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ವರದಿ: ನಂದೀಶ್ ನಾಯ್ಕ ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


