ಬೀಜಿಂಗ್: ವ್ಯಕ್ತಿಯೊಬ್ಬ ಒಟ್ಟು 10 ಮಂದಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಚೀನಾದ ಝೆನ್ ಕ್ಸಿಯಾಂಗ್ ಕೌಂಟಿಯ ಚೆಂಗ್ನಾನ್ ಆಸ್ಪತ್ರೆಯಲ್ಲಿ ನಡೆದಿದೆ. ಏಕಾಏಕಿ ಆಸ್ಪತ್ರೆಗೆ ನುಗ್ಗಿದ ವ್ಯಕ್ತಿಯು 10 ಮಂದಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇನ್ನು ಈ ಘಟನೆಯಲ್ಲಿ 23ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿದ ಪೊಲೀಸರು ಶಂಕಿತನನ್ನು ಬಂಧಿಸಿದ್ದಾರೆ.
ಇನ್ನು, ಸದ್ಯ 10 ಮಂದಿಯನ್ನು ಕೊಲೆ ಮಾಡಿದ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಾಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಕೂಡ ಚೀನಾದ ದಕ್ಷಿಣ ಚೀನಾದ ಗುವಾಂಗ್ ಡಾಂಗ್ ಪ್ರಾಂತ್ಯದಲ್ಲಿ ಶಿಶುವಿಹಾರದಲ್ಲಿ ಆರು ಮಂದಿ ಕೊಲೆಯಾಗಿದ್ದರು ಮತ್ತು ಒಬ್ಬರು ಗಾಯಗೊಂಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296