ಬೆಂಗಳೂರು: ಮರದ ಕೊಂಬೆ ತಲೆ ಮೇಲೆ ಬಿದ್ದು ಮೆದುಳಿನ ಭಾಗದಲ್ಲಿ ರಕ್ತ ಸ್ರಾವವಾಗಿ ಸಾವಿನ ದವಡೆಯಲ್ಲಿದ್ದ ವ್ಯಕ್ತಿಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಸಂಕೀರ್ಣ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ಫೋರ್ಟಿಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ನಿರ್ದೇಶಕ ಡಾ. ರಾಜಕುಮಾರ್ ದೇಶಪಾಂಡೆ ಮಾತನಾಡಿ, 35 ವರ್ಷದ ವ್ಯಕ್ತಿ ಉದ್ಯಾನದಲ್ಲಿ ವಾಕಿಂಗ್ ಮಾಡುವ ವೇಳೆ ಮರದ ಕೊಂಬೆ ತಲೆ ಮೇಲೆ ಬಿದ್ದು ತಲೆಗೆ ತೀವ್ರತರ ಗಾಯವಾಗಿತ್ತು ಆಪರೇಷನ್ ಮಾಡಲಾಗಿದೆ, ವ್ಯಕ್ತಿ ಆರೋಗ್ಯವಾಗಿದ್ದಾರೆ ಎಂದರು.


