ಮಂಡ್ಯ: ಬಿರುಗಾಳಿ ಸಹಿತ ಸುರಿದ ಮಳೆಗೆ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಡ್ಯದಲ್ಲಿನಡೆದಿದೆ.
ಮಂಡ್ಯ ನಗರದ ಆಸ್ಪತ್ರೆಯೊಂದರ ಬಳಿ ಈ ಘಟನೆ ಜರುಗಿದೆ. ಮಂಡ್ಯ ತಾಲೂಕಿನ ಜಿ. ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್(27) ಮೃತ ಯುವಕನಾಗಿದ್ದಾನೆ.
ಕಾರ್ತಿಕ್ ಸೋಮವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯ ಆರೋಗ್ಯ ವಿಚಾರಿಸಿ ವಾಪಾಸ್ಸಾಗುತ್ತಿದ್ದ ವೇಳೆ ಬಿರುಗಾಳಿ ಸಹಿತ ಮಳೆ ಬಂದ ಹಿನ್ನೆಲೆ ಬೈಕ್ ನಿಲ್ಲಿಸಿ ಸ್ನೇಹಿತನ ಕಾರು ಹತ್ತಿ ಕುಳಿತಿದ್ದ. ಈ ವೇಳೆ ಮರದ ಕೆಳಗೆ ಕಾರು ನಿಲ್ಲಿಸಿದ್ದರಿಂದ ಬಿರುಗಾಳಿಗೆ ಕಾರಿನ ಮೇಲೆಯೇ ಮರ ಬಿದ್ದಿದೆ. ಇದರಿಂದ ಸ್ಥಳದಲ್ಲೇ ಕಾರ್ತಿಕ್ ಸಾವನ್ನಪ್ಪಿದ್ದು, ಕಾರಿನ ಹೊರಗಡೆ ನಿಂತಿದ್ದ ಸ್ನೇಹಿತ ಪ್ರಾಣಾಪಾಯಾದಿಂದ ಪಾರಾಗಿದ್ದಾನೆ. ಈ ಸಂಬಂಧ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296