ಬುಡಕಟ್ಟು ಜನಾಂಗದ ಅಲೆಮಾರಿ ಕುಟುಂಬ ವಾಸಿಸುತ್ತಿದ್ದ ಗುಡಿಸಲಿನ ಮೇಲೆ ಮರ ಬಿದ್ದು ನಾಲ್ವರು ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಮೃತರಲ್ಲಿ ಮೂವರು ಮಹಿಳೆಯರೂ ಸೇರಿದ್ದಾರೆ ಎಂದು ಕಿಶ್ತ್ವಾರ್ ಉಪ ಆಯುಕ್ತರು ತಿಳಿಸಿದ್ದಾರೆ. ಕೇಶವನ್ ಬೆಲ್ಟ್‌ನ ಭಾಲ್ನಾ ಅರಣ್ಯ ಪ್ರದೇಶದಲ್ಲಿ ಈ ದುರಂತ ಘಟನೆ ನಡೆದಿದೆ.
ಅಲೆಮಾರಿ ಕುಟುಂಬವು ಮೇಕೆಗಳೊಂದಿಗೆ ಡಚಾಕ್ಕೆ ಹೋಗುತ್ತಿತ್ತು. ಭಾರೀ ಮಳೆಯ ನಂತರ ಅವರು ಭಾಲ್ನಾ ಕಾಡಿನಲ್ಲಿ ತಾತ್ಕಾಲಿಕ ಗುಡಿಸಲು ನಿರ್ಮಿಸಿದರು. ಇದೇ ವೇಳೆ ಜೋರಾದ ಗಾಳಿ ಮಳೆಗೆ ಬೃಹತ್ ಮರವೊಂದು ಮುರಿದು ಅವರ ಗುಡಿಸಲಿನ ಮೇಲೆ ಬಿದ್ದಿದೆ.
ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಆದರೆ ಈ ದುರಂತದಲ್ಲಿ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.” ಎಂದು ಕಿಶ್ತ್ವಾರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಖಲೀಲ್ ಪೋಸ್ವಾಲ್ ಪಿಟಿಐಗೆ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


