ಶಿವಮೊಗ್ಗ: ಹಳೆ ವೈಷಮ್ಯ ಹಿನ್ನೆಲೆ ಎರಡು ಗುಂಪುಗಳ ನಡುವೆ ಗಲಾಟೆ ಆಗಿದ್ದು, ಈ ವೇಳೆ ಗಲಾಟೆಯಲ್ಲಿ 5 ಮಂದಿಗೆ ಚಾಕು ಇರಿದ ಘಟನೆ ಶಿವಮೊಗ್ಗದ ದ್ರೌಪದಮ್ಮ ಸರ್ಕಲ್ ನಲ್ಲಿ ತಡರಾತ್ರಿ ನಡೆದಿದೆ.
ಪವನ್ ಹಾಗೂ ಕಿರಣ್ ಎಂಬ ಎರಡು ಗುಂಪಿನಿಂದ ಗಲಾಟೆ ನಡೆದಿದ್ದು, ಚಾಕು ಇರಿತಕ್ಕೊಳಗಾದ ಐದು ಮಂದಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


