ಇತ್ತೀಚೆಗೆ ನಡೆದಿದ್ದ ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುವ ಸಂದರ್ಭದಲ್ಲಿ ದೂರು ದಾಖಲಾಗಿದ್ದ ಮೂವರು ವಿದ್ಯಾರ್ಥಿನಿಯರನ್ನ ಪ್ರತ್ಯೇಕವಾಗಿ ಕರೆಸಿ ವಿಚಾರಣೆ ನಡೆಸಿದಾಗ, ವಿಡಿಯೋ ಚಿತ್ರೀಕರಣ ಮಾಡಿರುವುದು ನಿಜ ಎಂದು ಆ ಮೂವರು ವಿದ್ಯಾರ್ಥಿನಿಯರು ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ.
ಇನ್ನು ಪ್ರಕರಣದಲ್ಲಿ ತಪ್ಪೊಪ್ಪಿಗೆ ಬಗ್ಗೆ ವಿದ್ಯಾರ್ಥಿನಿಯರು ಬಾಯಿ ಬಿಟ್ಟಿದ್ದು, ಇದನ್ನು ತಮಾಷೆಗೆಂದು ಮಾಡಲಾಗಿದೆ ಹೊರತು, ಬೇರೆ ಯಾವುದೇ ದುರುದ್ದೇಶದಿಂದ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಪ್ರಕರಣದಲ್ಲಿ ಅಲಿಮತುಲ್ ಶೈಫಾ, ಶಬಾನಾಜ್ ಮತ್ತು ಅಲಿಯಾ ಎಂಬ ಮೂವರು ವಿದ್ಯಾರ್ಥಿನಿಯರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದು, ಈಗ ವಿದ್ಯಾರ್ಥಿನಿಯರೇ ತಪ್ಪೊಪ್ಪಿಗೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


