ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ ಗೆ ಕೂದಲು ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ. ಮಲ್ಲತ್ತಹಳ್ಳಿಯಲ್ಲಿ ವಾಸವಿದ್ದ 33 ವರ್ಷದ ಶ್ವೇತಾ ಮೃತ ದುರ್ದೈವಿ.
ಮಿಕ್ಸರ್ ಗೆ ಜಡೆ ಸಿಲುಕಿ ಮಹಿಳೆಯ ತಲೆ ಕಟ್ ಆಗಿದೆ. ಇನ್ನುಳಿದವರು ಮಿಕ್ಸರ್ ಬಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


