ಬೆಂಗಳೂರು: ಗಂಡನ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬಳು ಹೆತ್ತ ಮಗುವನ್ನು ಉಸಿರುಗಟ್ಟಿಸಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗು ಶೃತಿಕಾ(2) ಸಾವನ್ನಪ್ಪಿದ್ದು, ತಾಯಿ ಚಿನ್ನಾ ಆಸ್ಪತೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ.
ಪ್ರತಿನಿತ್ಯ ಗಂಡ ಲಕ್ಷ್ಮೀ ನಾರಾಯಣ ವಿನಾಕಾರಣ ನೀಡುತ್ತಿದ್ದ ಹಿಂಸೆಯಿಂದ ಚಿನ್ನಾ ಬೇಸತ್ತಿದ್ದಳು. ಇದರಿಂದಾಗಿ, ಮಗುವನ್ನು ಉಸಿರುಗಟ್ಟಿಸಿ ಹತ್ಯೆಗೈದ ಚಿನ್ನಾ ತಾನೂ ಸಹ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಸ್ಥಳೀಯರು ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಮುಂದುವರೆದಿದೆ. ಪತಿ ಲಕ್ಷ್ಮೀ ನಾರಾಯಣ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


