ಸ್ಟೇಷನ್ ನಲ್ಲಿ ಮಹಿಳೆಯೊಬ್ಬರು ಇನ್ಸ್ಪೆಕ್ಟರ್ ಗೆ ಕಪಾಳ ಮೋಕ್ಷ ಮಾಡಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ಠಾಣೆಯಲ್ಲಿ ನಡೆದಿದೆ. ಇನ್ಸ್ ಪೆಕ್ಟರ್ ರವಿ ಅವರಿಗೆ ಫೌಜೀಯಾ ಎಂಬಾಕೆ ಕಪಾಳ ಮೋಕ್ಷ ಮಾಡಿದ್ದು, ಫೌಜೀಯಾ ಹಾಗೂ ಇನ್ನೊಂದು ಗುಂಪು ಸೈಟ್ ವಿಚಾರಕ್ಕೆ ಜ್ಞಾನಭಾರತಿ ಠಾಣೆ ಮೆಟ್ಟಿಲೇರಿದೆ. ಈ ವೇಳೆ ಸ್ಟೇಷನ್ ಆವರಣದಲ್ಲಿ ಎರಡು ಗುಂಪುಗಳ ನಡುವೆ ಜಗಳವಾಗಿದೆ.
ಈ ವೇಳೆ ಡ್ಯೂಟಿಯಲ್ಲಿದ್ದ ಇನ್ಸ್ ಪೆಕ್ಟರ್ ರವಿ ಗಲಾಟೆ ಮಾಡದಂತೆ ವಾರ್ನ್ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಫೌಜೀಯ ಏಕಾಏಕಿ ಇನ್ಸ್ಪೆಕ್ಟರ್ ಕಪಾಳಕ್ಕೆ ಹೊಡೆದಿದ್ದಾರೆ. ಘಟನೆ ಸಂಬಂಧ ಫೌಜೀಯ ಹಾಗೂ ಮತ್ತಿಬ್ಬರು ಮಹಿಳೆಯರ ಮೇಲೆ ಜ್ಞಾನಭಾರತಿ ಠಾಣೆ ಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಇನ್ನೂ ಆರೋಪಿ ಫೌಜೀಯ ಮಾಮವ ಸಂಘಟನೆ ಕಾರ್ಯಕರ್ತೆ ಅಂತ ಹೇಳಾಲಗ್ತಿದ್ದು. ಸದ್ಯ ಮೂವರನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296