ತುಮಕೂರು: ನ್ಯಾಯಾಲಯದ ಆವರಣದಲ್ಲಿ ಬೀದಿ ನಾಯಿಯೊಂದು ಮಹಿಳೆಯ ಮೇಲೆ ಭೀಕರವಾಗಿ ದಾಳಿ ನಡೆಸಿದ್ದು, ತೀವ್ರ ರಕ್ತಸ್ರಾವವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ತುಮಕೂರು ಜಿಲ್ಲೆಯ ಗುಬ್ಬಿ ನ್ಯಾಯಾಲಯದ ಆವರಣದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆಯನ್ನು ತಿಪಟೂರು ತಾಲ್ಲೂಕಿನ ಬೀರಸಂದ್ರ ಗ್ರಾಮದ ನಿವಾಸಿ ಗಂಗೂಬಾಯಿ (35) ಎಂದು ಗುರುತಿಸಲಾಗಿದ್ದು, ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ನ್ಯಾಯಾಲಯಕ್ಕೆ ಬಂದಿದ್ದರು.
ಗಂಗೂಬಾಯಿ ಶೌಚಾಲಯದಿಂದ ಹೊರಬಂದಾಗ ನಾಯಿ ಆಕೆಯ ಮೇಲೆ ಎರಗಿದೆ. ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ, ಪದೇ ಪದೇ ದಾಳಿ ಮಾಡಿ, ಆಕೆಯ ಮುಖವನ್ನು ಕಚ್ಚಿದೆ. ಆಕೆಯ ಕಿರುಚಾಟ ಕೇಳಿ ಸ್ಥಳೀಯರು ಧಾವಿಸಿ ಆಕೆಯನ್ನು ರಕ್ಷಿಸಲು ಹೋಗಿ ನಾಯಿಯ ಹಿಡಿತದಿಂದ ಬಿಡಿಸುವಲ್ಲಿ ಯಶಸ್ವಿಯಾದರು.
ಘಟನೆಯಿಂದ ಆಘಾತಕ್ಕೊಳಗಾದ ಮತ್ತು ಕೋಪಗೊಂಡ ಅವರು ನಂತರ ನಾಯಿಯನ್ನು ಬೆನ್ನಟ್ಟಿ ಕೊಂದಿದ್ದಾರೆ. ಗಾಯಾಳು ಮಹಿಳೆಯನ್ನು ಮೊದಲು ಚಿಕಿತ್ಸೆಗಾಗಿ ಗುಬ್ಬಿ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ನಂತರ ಉನ್ನತ ವೈದ್ಯಕೀಯ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಯಿತು ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC