ಹೈದರಾಬಾದ್: ಚಲಿಸುತ್ತಿದ್ದ ಬಸ್ ನಲ್ಲಿಯೇ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದ್ದು, ಈ ಘಟನೆ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ.
ಹರಿಕೃಷ್ಣ ಟ್ರಾವೆಲ್ಸ್ ಗೆ ಸೇರಿದ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಚಾಲಕನೇ ಈ ದುಷ್ಕೃತ್ಯ ಎಸಗಿದ್ದಾನೆ. ಕೂಲಿ ಕೆಲಸ ಮಾಡುತ್ತಿರುವ ಮಹಿಳೆ ತನ್ನ ಚಿಕ್ಕಮಗಳ ಜೊತೆಗೆ ನಿರ್ಮಲ್‌ನಿಂದ ಪ್ರಕಾಶಂ ಜಿಲ್ಲೆಯ ಪಾಮುರು ಕಡೆಗೆ ಹೋಗಲು ಬಸ್ ಹತ್ತಿದ್ದರು.
ಇದೇ ವೇಳೆ ಬಸ್ ಚಾಲಕ ರಾತ್ರಿ ಊಟದ ನಂತರ ಸಹ ಚಾಲಕನಿಗೆ ಬಸ್ ಓಡಿಸಲು ಕೊಟ್ಟು ಬಸ್ ಹಿಂಬದಿ ಸೀಟ್ ಗೆ ಬಂದಿದ್ದು, ಅಲ್ಲಿದ್ದ ಕೂಲಿ ಕಾರ್ಮಿಕ ಮಹಿಳೆ ಮೇಲೆ ಆಕೆ ಪುಟ್ಟ ಮಗಳ ಮುಂದೆಯೇ ಅತ್ಯಾಚಾರ ಎಸಗಿದ್ದಾನೆ. ಬಸ್ ಚಾಲನೆಯಲ್ಲಿರುವಾಗಲೇ ಈ ಕೃತ್ಯ ಎಸಗಲಾಗಿದೆ.
ಅತ್ಯಾಚಾರದ ವೇಳೆ ಮಹಿಳೆಯ ಬಾಯಿಗೆ ಬೆಡ್ ಶೀಟ್ ತುರುಕಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ. ಇದೇ ವೇಳೆ ಮಹಿಳೆ ಮೇಲೆ ಹಲ್ಲೆ ಕೂಡಾ ನಡೆಸಲಾಗಿದೆ. ಇನ್ನು ಘಟನೆಯ ನಂತರ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಕೃತ್ಯ ನಡೆಸಿದ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಸದ್ಯ ಪೊಲೀಸರು ಬಸ್ ನ ಸಹ ಚಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದು, ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA