ಬೆಂಗಳೂರು: ಕಾರು ಕಲಿಯಲು ಹೋಗಿದ್ದ ಮಹಿಳೆಯೊಬ್ಬರು ಮನೆ ಮುಂದೆ ಆಟವಾಡ್ತಿದ್ದ ಬಾಲಕಿ ಮೇಲೆ ಕಾರು ಹತ್ತಿಸಿದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಗ್ರಾಮದಲ್ಲಿ ನಡೆದಿದೆ. ಮನೆ ಮುಂದೆ ಆಟವಾಡ್ತಿದ್ದ ಬಾಲಕಿಗೆ ಕಾರು ಡಿಕ್ಕಿ ಹೊಡೆದಿದ್ದು ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ನಾಗಲಕ್ಷ್ಮೀ(7) ಮೃತ ಬಾಲಕಿಯಾಗಿದ್ದಾಳೆ.
ಪಕ್ಕದ ಮನೆಯ ಮಹಿಳೆಯಿಂದಲೇ ಅಪಘಾತ ಸಂಭವಿಸಿದೆ. ಬ್ರೇಕ್ ತುಳಿಯಲು ಹೋಗಿ ಎಕ್ಸಲೇಟರ್ ತುಳಿದು ಕಾರಣ ಮನೆ ಮುಂದೆ ಆಟವಾಡ್ತಿದ್ದ ಬಾಲಕಿ ಮೇಲೆ ಕಾರು ಹತ್ತಿದೆ. ಈ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಘಟನೆ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮಹಿಳೆಯನ್ನ ವಶಕ್ಕೆ ಪಡೆದು ಕಾರು ಸೀಜ್ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


