ಯುವತಿಯೊಬ್ಬಳು ತನ್ನ ಲಿವ್ ಇನ್ ಸಂಗಾತಿಯನ್ನು ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ.
ಹತ್ಯೆ ಮಾಡಿದ ಮಹಿಳೆಯನ್ನು ಬೆಳಗಾವಿ ಮೂಲದ 24 ವರ್ಷದ ರೇಣುಕಾ ಎಂದು ಗುರುತಿಸಲಾಗಿದೆ. ಮೃತನನ್ನು ಕೇರಳ ಮೂಲದ 29 ವರ್ಷದ ಜಾವೇದ್ ಎಂದು ಗುರುತಿಸಲಾಗಿದೆ. ಹೆಚ್ಚಿನ ತನಿಖೆಗೆ ಹುಳಿಮಾವು ಪೊಲೀಸರು ಅಪರಾಧಿಯನ್ನು ವಿಚಾರಣೆ ಮಾಡುತ್ತಿದ್ದಾರೆ.


