ಬೆಂಗಳೂರು: ಪ್ರೇಮ ವೈಫಲ್ಯಕ್ಕೆ ಬೇಸತ್ತು ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ಸಂಜೆ ಮಹಾಲಕ್ಷ್ಮಿ ಲೇಔಟ್ ಠಾಣಾ ವ್ಯಾಪ್ತಿಯ ಜೆ ಎಸ್ ನಗರದಲ್ಲಿ ನಡೆದಿದೆ. ನವೀನ್ (27) ಆತ್ಮಹತ್ಯೆಗೆ ಶರಣಾದ ಯುವಕ.
ಚಾಮರಾಜನಗರ ಜಿಲ್ಲೆಯ ಚಿಕ್ಕಲೂರು ಮೂಲದ ನವೀನ್ ಕುಟುಂಬದವರೊಂದಿಗೆ ಬೆಂಗಳೂರಲ್ಲಿ ವಾಸವಿದ್ದ. ಬಾಳೆಕಾಯಿ ಮಂಡಿ ಇಟ್ಟುಕೊಂಡು ವ್ಯವಹಾರ ಮಾಡುತ್ತಿದ್ದ. ಯುವತಿಯೊಬ್ಬಳನ್ನು ನವೀನ್ ಪ್ರೀತಿಸುತ್ತಿದ್ದು, ಆಕೆ ಪ್ರೀತಿ ನಿರಾಕರಿಸಿದ ಕಾರಣ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನವೀನ್ ಪ್ರೇಮ ವೈಫಲ್ಯದ ಬಗ್ಗೆ ಡೆತ್ ನೋಟ್ ನಲ್ಲಿ ಬರೆದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಪ್ರಾಣ ಕಳೆದುಕೊಂಡಿದ್ದಾನೆ. ಮೃತ ನವೀನ್ ಕುಟುಂಬಸ್ಥರು ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಕುಟುಂಬಸ್ಥರ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


