ಬೆಂಗಳೂರು: ನಾನು ಸತ್ಯ ಹುಡುಕಲು ಹೋಗ್ತಿದ್ದೀನಿ, ನಾನು ವಿಷ್ಣುವಿನ ಮಗ ಎಂದು ಪತ್ರ ಬರೆದಿಟ್ಟು ಬಿಇಎಲ್ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ
ಮೋಹಿತ್ ಋಷಿ ನಾಪತ್ತೆಯಾದ ಯುವಕನಾಗಿದ್ದಾನೆ. ಅಸತ್ಯದ ಪ್ರಪಂಚದಲ್ಲಿ ಸತ್ಯ ಹುಡುಕಲು ಸತ್ಯದ ಪ್ರಪಂಚದ ಕಡೆ ಹೋಗ್ತಿದ್ದೇನೆ, ನಾನು ವಿಷ್ಣುವಿನ ಮಗ, ನಾನು ಸತ್ಯವನ್ನು ಹುಡುಕಲು ಹೋಗುತ್ತಿದ್ದೇನೆ ಎಂದು ಪತ್ರ ಬರೆದಿಟ್ಟು ಮೊಬೈಲ್ ಮನೆಯಲ್ಲಿಯೇ ಬಿಟ್ಟು ಯುವಕ ಮನೆಯಿಂದ ನಾಪತ್ತೆಯಾಗಿದ್ದಾನೆ.
ಜ.16ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಇದ್ದಕ್ಕಿದ್ದ ಹಾಗೆ ಯುವಕ ಮನೆ ಬಿಟ್ಟು ಹೊರಟು ಹೋಗಿದ್ದಾನೆ. ಸದ್ಯ ಘಟನೆಯಿಂದ ಆತಂಕಕ್ಕೊಳಗಾದ ಯುವಕನ ಪೋಷಕರು ಕೊಡಿಗೇಹಳ್ಳಿ ಪೊಲೀಸರಿಗೆ ಪೋಷಕರು ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಪರಿಶೀಲನೆ ಮಾಡಿ ಮೋಹಿತ್ ಗಾಗಿ ಹುಡುಕಾಟ ಆರಂಭಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4