ರಾಯಚೂರು: ಮೊಹರಂ ಆಚರಣೆ ವೇಳೆ ಅಗ್ನಿ ಕುಂಡದಲ್ಲಿ ಬಿದ್ದ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನಲ್ಲಿ ನಡೆದಿದೆ.
ಹನುಮಂತ ಯರಗಂಟಿ (33) ಗಾಯಗೊಂಡ ಯುವಕನಾಗಿದ್ದು, ದರ್ಗಾದ ಮುಂದೆ ಕೆಂಡ ಹಾಯಲು ಸಿದ್ಧಪಡಿಸಲಾದ ಅಗ್ನಿ ಕುಂಡದಲ್ಲಿ ಕಟ್ಟಿಗೆಗಳನ್ನು ಹಾಕಿ ಬೆಂಕಿ ಹಚ್ಚಲಾಗಿತ್ತು. ಈ ವೇಳೆ ಹನುಮಂತ ಬೆಂಕಿಗೆ ಬಿದ್ದಿದ್ದಾನೆ. ಪರಿಣಾಮವಾಗಿ ಬೆಂಕಿಯಿಂದ ದೇಹ ಸುಟ್ಟು ಹೋಗಿದೆ. ತಕ್ಷಣ ಸ್ಥಳದಲ್ಲಿದ್ದವರು ಆತನ ನೆರವಿಗೆ ಧಾವಿಸಿದ್ದು, ರಕ್ಷಿಸಲು ಹರಸಾಹಸ ಪಟ್ಟಿದ್ದಾರೆ.
ಬಳಿಕ ಗಾಯಾಳುವನ್ನು ಲಿಂಗಸೂಗೂರು ತಾಲೂಕ್ ಆಸ್ಪತ್ರೆಗೆ, ತದನಂತರ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆತ ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC