ಬೆಂಗಳೂರು: ಅಪ್ರಾಪ್ತ ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿದ ಯುವಕನಿಗೆ ಸ್ಥಳೀಯರು ಗೂಸಾ ಕೊಟ್ಟಿರುವ ಘಟನೆ ಬ್ಯಾಡರಹಳ್ಳಿ ಬಳಿ ಇರುವ ಅನುಪಮ ಆಸ್ಪತ್ರೆ ಬಳಿ ಜರುಗಿದೆ. ಗಾಂಜಾ ಅಮಲಿನಲ್ಲಿ ಅಪ್ರಾಪ್ತ ಬಾಲಕಿಯ ಜೊತೆ ಯುವಕ ಅನುಚಿತ ವರ್ತನೆ ಮಾಡ್ತಿದ್ದ. ಆಸ್ಪತ್ರೆಯ ಮುಂಭಾಗ ಅಪ್ರಾಪ್ತೆ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ್ದಾನೆಂಬ ಆರೋಪ ಕೇಳಿ ಬಂದಿದೆ.
ಯುವಕನ ಕುಕೃತ್ಯ ನೋಡಿದ್ದ ಸ್ಥಳೀಯರು ತರಾಟೆ ತೆಗೆದುಕೊಂಡು ಯುವಕನನ್ನ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೃತ್ಯದ ಬಗ್ಗೆ ದೂರು ದಾಖಲು ಮಾಡಲು ಯಾರೂ ಮುಂದೆ ಬಾರದ ಹಿನ್ನೆಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


