ಬೆಂಗಳೂರು: ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಜಿ ಮೇಲಿಂದ ಬಿದ್ದು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಗುಲ್ಬರ್ಗ ಮೂಲದ 28 ವರ್ಷ ವಯಸ್ಸಿನ ಯುವಕ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಗುಲ್ಬರ್ಗದಿಂದ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದ್ದ ಯುವಕ ಬೆಂಗಳೂರಿನ ಅಂಬೇಡ್ಕರ್ ನಗರದಲ್ಲಿ ಪಿಜಿಯಲ್ಲಿ ತಂಗಿಕೊಂಡು, ಕೆಲಸಕ್ಕಾಗಿ ಎಲ್ಲಾ ಕಡೆ ಪ್ರಯತ್ನಿಸಿದ್ದ. ಆದರೇ, ಯಾವುದೇ ಪ್ರಯೋಜನ ಸಿಕ್ಕಿರಲಿಲ್ಲ.
ಇದರಿಂದ ಬೇಸತ್ತ ಯುವಕ ತಾನು ತಂಗಿದ್ದ ಪಿಜಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ವೈಟ್ ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296