ಬೆಂಗಳೂರು: ಮದ್ಯದ ನಶೆಯಲ್ಲಿ ಕಾರು ಚಲಾಯಿಸಿ ಎಂಟು ಬೈಕ್ ಗಳು ಸಂಪೂರ್ಣ ಜಖಂಗೊಂಡಿರುವ ಘಟನೆ ಉಲ್ಲಾಳು ಬಳಿಯ ಕೆಎಲ್ ಇ ಲಾ ಕಾಲೇಜು ಬಳಿ ನಡೆದಿದೆ.
ಭರತ್ ಎಂಬ ಯುವಕ ತನ್ನ ಕಾರಿನಲ್ಲಿ ನಾಲ್ವರು ಸ್ನೇಹಿತರನ್ನ ಕರೆದುಕೊಂಡು ಹೋಗಿ ಪಾರ್ಟಿ ಮಾಡಿದ್ದಾನೆ. ಸ್ನೇಹಿತ ಗುರುದೀಪ್ ಗೆ ಕಾರು ಚಲಾಯಿಸಲು ಕೊಟ್ಟು ಡ್ರೈವ್ ಹೋಗಿದ್ದಾರೆ.
ಮದ್ಯದ ನಶೆಯಲ್ಲಿ ಕೆಎಲ್ ಇ ಲಾ ಕಾಲೇಜಿನ ಬಳಿ ವೇಗವಾಗಿ ಕಾರು ಚಲಾಯಿಸಿಕೊಂಡು ಗುರುದೀಪ್ ಬಂದಿದ್ದಾನೆ. ಬಳಿಕ ಕಾರು ನಿಯಂತ್ರಣ ತಪ್ಪಿ ಬೇಕರಿ ಬಳಿ ನಿಂತಿದ್ದ ಬೈಕ್ ಗಳ ಮೇಲೆ ಹರಿದಿದೆ. ಕಾರು ಗುದ್ದಿದ ರಭಸಕ್ಕೆ ಎಂಟು ಬೈಕುಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.


