ಅಪ್ರಾಪ್ತೆ ಹಿಂದೂ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ಸದ್ದಾಂ ಹುಸೇನ್ ಬಂಧಿತ ಆರೋಪಿ. ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಟ್ಟೆ ನೋವು ಹಿನ್ನೆಲೆ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ತಪಾಸಣೆ ವೇಳೆ ಅಪ್ರಾಪ್ತೆ ಗರ್ಭಿಣಿಯಾಗಿರುವುದು ದೃಢವಾಗಿದೆ. ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ.
ಮುಸ್ಲಿಂ ಯುವಕನ ವಿರುದ್ಧ ಅಪ್ರಾಪ್ತೆ ಪೋಷಕರು ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ದೂರು ದಾಖಲಿಸಿರುವುದಾಗಿ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರಿಂದ ಅಧಿಕೃತ ಮಾಹಿತಿ ನೀಡಲಾಗಿದೆ.
ಪ್ರತಿಭಟನೆ ಕಾವು ಜೋರಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸ್ ಇಲಾಖೆ ಎಸಿಪಿ ಶಿವಪ್ರಕಾಶ್ ನಾಯ್ಕ್ ಸಮ್ಮುಖದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಈ ವೇಳೆ ಆರೋಪಿ ಬಂಧನಕ್ಕೆ ಆಗ್ರಹಿಸಿ ನವನಗರ ಠಾಣೆ ಮುಂದೆ ಹಿಂದೂಪರ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗಿದೆ. ಪ್ರತಿಭಟನೆ ಹಿನ್ನಲೆ ನವನಗರ ಠಾಣೆಗೆ ಕಾನೂನು ಸುವ್ಯವಸ್ಥೆ ಡಿಸಿಪಿ ರಾಜೀವ್ ಆಗಮಿಸಿದ್ದು, ಪ್ರತಿಭಟನಾಕಾರರು ತರಾಟೆ ತೆಗೆದುಕೊಂಡರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


