ಬೆಂಗಳೂರು: ಐಸ್ ಕ್ರೀಮ್ ಕೊಡಿಸುವುದಾಗಿ ಆಮಿಷವೊಡ್ಡಿ 9 ವರ್ಷದ ಬಾಲಕನನ್ನು ಕಿಡ್ನ್ಯಾಪ್ ಮಾಡಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಚಿಕ್ಕತೋಗೂರು ಬಳಿ ಈ ಘಟನೆ ನಡೆದಿತ್ತು.. ಜಾರ್ಖಂಡ್ ಮೂಲದ ಮೊಹಮದ್ ಜಶಿಮುದ್ದೀನ್ ಶೇಕ್(24) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ..
ಮೊಹಮದ್ ಜಶಿಮುದ್ದೀನ್ ಶೇಕ್(24) ಬ್ಯುಸಿನೆಸ್ ನಲ್ಲಿ ಲಾಸ್ ಆಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಆತ ಮನೆ ಬಳಿ ಆಟವಾಡುತ್ತಿದ್ದ ಬಾಲಕನಿಗೆ ಐಸ್ ಕ್ರೀಮ್ ಕೊಡಿಸುವ ಆಮಿಷ ತೋರಿಸಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದ. ಜೂನ್ 17ರಂದು ಕಿಡ್ನ್ಯಾಪ್ ಮಾಡಲಾಗಿತ್ತು. ನಂತರ ಬಾಲಕನ ಪೋಷಕರಿಗೆ ಕರೆ ಮಾಡಿದ್ದ ಆರೋಪಿ 10 ಲಕ್ಷ ರೂಪಾಯಿ ತಂದುಕೊಡುವಂತೆ ಬೇಡಿಕೆ ಇಟ್ಟಿದ್ದ.
ಪದೇ ಪದೇ ಲೊಕೇಷನ್ ಬದಲಿಸುತ್ತಾ ಆತ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ.. ಕೊನೆಗೂ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಜೂನ್ 18ರಂದೇ ಬಂಧನವಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


