ಬೆಂಗಳೂರು: ಹೆಣ್ಣೂರು ಠಾಣೆ ವ್ಯಾಪ್ತಿಯಲ್ಲಿ ಕಾರು ಡಿಕ್ಕಿಯಾಗಿ ಪಾದಚಾರಿ ರಾಘವೇಂದ್ರ (21) ಮೃತಪಟ್ಟಿದ್ದು, ಅಪಘಾತದ ಬಳಿಕ ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ.
‘ಕೊಪ್ಪಳದ ರಾಘವೇಂದ್ರ, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಹೋಟೆಲೊಂದರಲ್ಲಿ ಸಹಾಯಕ ಕೆಲಸಕ್ಕೆ ಸೇರಿದ್ದರು. ಸ್ನೇಹಿತರ ಜೊತೆ ಕೊಠಡಿಯಲ್ಲಿ ವಾಸವಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ. ‘ಸೆ. 17ರಂದು ರಾಘವೇಂದ್ರ, ಇಬ್ಬರು ಸ್ನೇಹಿತರ ಜೊತೆ ಕೊಠಡಿಯತ್ತ ನಡೆದುಕೊಂಡು ಹೊರಟಿದ್ದರು. ಹೋಟೆಲ್ ಬಳಿ ರಸ್ತೆ ದಾಟುತ್ತಿದ್ದರು. ಆಗ ಕಾರು ಡಿಕ್ಕಿಯಾಗಿ ದಾರುಣ ಸಾವನ್ನಪ್ಪಿದ್ದಾರೆ.


