ಚಿಕ್ಕಬಳ್ಳಾಪುರ: ಯುವಕನೊಬ್ಬ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿದ್ದು, ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ವೇಳೆ ಘಟನೆ ನಡೆದಿದೆ. ಮೃತ ಯುವಕನನ್ನು ಬೆಂಗಳೂರಿನ ಬಾಬೂಸಾಪಾಳ್ಯದ ಅಭಿ(23) ಎಂದು ಗುರುತಿಸಲಾಗಿದೆ.
ಪ್ರವಾಸಕ್ಕೆ ಬಂದಿದ್ದ ವೇಳೆ ಜಲಾಶಯದಲ್ಲಿ ಈಜಲು ತೆರಳಿದ್ದಾಗ ಯುವಕ ಮುಳುಗಿ ಸಾವನ್ನಪ್ಪಿದ್ದಾನೆ. ಯುವಕನ ಮೃತದೇಹಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದು ಇದುವರೆಗೂ ಮೃತದೇಹ ಪತ್ತೆಯಾಗಿಲ್ಲ. ಇದೀಗ ಎನ್ಡಿಆರ್ಎಫ್ ತಂಡದಿಂದ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಲಾಗುತ್ತಿದೆ.


