ತಿಪಟೂರು: ಕೆರೆಯಲ್ಲಿ ಮುಖತೊಳೆಯಲು ಹೋದ ಯುವಕ ಕಾಲು ಜಾರಿ ಬಿದ್ದು ನೀರುಪಾಲಾದ ಘಟನೆ ತಿಪಟೂರು ತಾಲೂಕಿನ ಕಸಬಾಹೋಬಳಿ ಮತ್ತಿಹಳ್ಳಿಯಲ್ಲಿ ನಡೆದಿದೆ.
ಯುವಕ ಮುಖ ತೊಳೆಯಲು ಹೋಗಿದ್ದ ವೇಳೆ ಯುವಕ ಕಾಲು ಜಾರಿ ಬಿದ್ದು ನೀರುಪಾಲಾಗಿದ್ದಾನೆ ಎಂದು ಹೇಳಲಾಗಿದೆ. ಮೃತಪಟ್ಟ ಯುವಕನನ್ನು ಗ್ರಾಮದ ದಯಾನಂದ್(19) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಹೊನ್ನವಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ. ಸದ್ಯ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ. ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4